(Dharwad) : ಗರ್ಭಿಣಿಯೊಬ್ಬರು(Pregnant) ಹೆರಿಗೆಗೆಂದು (Delivery) ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಂಬುಲೆನ್ಸ್‌ನಲ್ಲೇ (Ambulance) ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೆನಕುಂಠಿ ಗ್ರಾಮದ ಆಫ್ರೀನ್ ಎಂಬುವವರೇ ಅಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಮೇ 25ರಂದು ಆಫ್ರೀನ್ ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರ ಕುಟುಂಬಸ್ಥರು 108 ಗೆ ಕರೆ ಮಾಡಿದ್ದರು. ಅಂಬುಲೆನ್ಸ್ ಸಿಬ್ಬಂದಿ ಕುಂದಗೋಳ ತಾಲೂಕು ಆಸ್ಪತ್ರೆಗೆ ಆಕೆಯನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಜೋರಾಗಿದೆ.
ಕೂಡಲೇ ಎಚ್ಚೆತ್ತುಕೊಂಡ ಅಶೋಕ್ ಪೂಜಾರ, ಬಸವರಾಜ ರಾಠೋಡ್ ಎಂಬ ಸಿಬ್ಬಂದಿ ಅಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.