Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ (Congress Worker Murder) ರವಿ ಅಲಿಯಾಸ್ ಮತ್ತಿರವಿ(42) ಕೊಲೆಯಾದ ಯುವಕ. ಬೈಕ್ ಗಳಲ್ಲಿ ಬಂದ ಐದಾರು ಜನ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. CMH ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ (Murder) ಮಾಡಿದ್ದಾರೆ ಎನ್ನಲಾಗಿದೆ.
ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಹುಟ್ಟು ಹಬ್ಬದ ಸಂಭ್ರಮಕ್ಕೆ ಆಗಮಿಸುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಕೂಡ ಹಲವು ಕೇಸ್ ಗಳಿವೆ ಎಂದು ತಿಳಿದುಬಂದಿದೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಿದ್ದಾರೆ.