Bangalore : ರಾಜ್ಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು (Bangalore rain) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ ಜೊತೆ ಸಾಧಾರಣ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾರವಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಬಿರುಗಾಳಿ ಸಹಿತ ಹಗುರದಿಂದ ಗುಡುಗು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ.