Kornersite

Entertainment Just In Sandalwood

Rishabh Shetty: ಮತ್ತೊಂದು ಸಾಹಸಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಅವರೇ ಹೇಳಿದ್ದೇನು?

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಚಿತ್ರದ ನಂತರ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿರುವುದಾಗಿ ಹೇಳಿದ್ದಾರೆ.


ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Keradi Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.

ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಹೇಳಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ