ನವದೆಹಲಿ: ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಕೊನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.
ಎಚ್,ಕೆ. ಪಾಟೀಲ್, ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ, ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲಕ್ಷ್ಮಣ ಸವದಿ, ಎಸ್.ಎಸ್ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಭೈರತಿ ಸುರೇಶ್, ರಹೀಂ ಖಾನ್, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್, ಡಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ನೂತನ ಸಚಿವರು ನಾಳೆ ಅಥವಾ ನಾಡಿದ್ದು, ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಶರಣ ಪ್ರಕಾಶ್ ಪಾಟೀಲ್, ದಿನೇಶ್ ಗುಂಡೂರಾವ್, ಆರ್ ವಿ ದೇಶಪಾಂಡೆ, ಬಿ.ಕೆ. ಹರಿಪ್ರಸಾದ್ ಸಂಪುಟ ಸೇರುವ ಕುರಿತು ಮಲ್ಲಿಕಾರ್ಜುನ ಖರ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.