Bangalore : ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟ ರಚನೆಗೆ ಕೂಡ ಕಾಂಗ್ರೆಸ್ ನಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಒಮ್ಮತದ ಬಾರದ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಹೈಕಮಾಂಡ್ಗೆ ತಲೆನೋವಾಗಿತ್ತು. ಸದ್ಯ ಅಳೆದು ತೂಗಿ ಸಚಿವರ ಪಟ್ಟಿ ಸಿದ್ಧವಾಗಿದ್ದು, (Cabinet Ministers) ಮೇ 28ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಸಚಿವರ ಪಟ್ಟಿ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ಕೆಲವು ಹಿರಿಯ ಶಾಸಕರು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರೆ, ಕೆಲವು ಹಿರಿಯರು ಕೂಡ ವಂಚಿತರಾಗಿದ್ದಾರೆ. ಆರ್.ವಿ.ದೇಶಪಾಂಡೆ, ಬಿ.ಕೆ. ಹರಿಪ್ರಸಾದ್ ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಡಿಕೆಶಿ ಅವರು ಮಧು ಬಂಗಾರಪ್ಪ ಹಾಗೂ ಬಿ.ಕೆ. ಹರಿಪ್ರಸಾದ್ ಪರ ಬ್ಯಾಟಿಂಗ್ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಫೈನಲ್ ಆಗಿದೆ ಎನ್ನಲಾಗುತ್ತಿದೆ.
ಇನ್ನೂ ಸಚಿವರ ಪಟ್ಟಿಯಲ್ಲಿ ಹೆಚ್.ಕೆ.ಪಾಟೀಲ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಕೆ.ವೆಂಕಟೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಇದ್ದಾರೆ. ವಿಧಾನಸಭೆ ಉಪಸಭಾಪತಿ ಸ್ಥಾನವು ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್ ಗೆ ಒಲಿದಿದೆ.