ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ವಿಕ್ರಾಂತ್ ರೋಣ ನಂತರ ಕಿಚ್ಚ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾಯ್ದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಕಿಚ್ಚ ಸುದೀಪ್ ತಮ್ಮ 46ನೇ ಸಿನಿಮಾ ಕುರಿತು ಅಪ್ಡೇಟ್ ನೀಡಿದ್ದಾರೆ. ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕನ್ನು ತಮಿಳಿನ ಕಲೈಪುಲಿ ಎಸ್ ಥಾನು ನಿರ್ಮಾಣ ಸಂಸ್ಥೆ ಬಿಡುಗಡೆ ಮಾಡಿದೆ. ಸುದೀಪ್ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣ ವಿಡಿಯೋ ಬಿಡುಗಡೆ ಮಾಡಲಾಗಿದೆ.
ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್’ ಸೇರಿದಂತೆ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್’ ಸಂಸ್ಥೆಗೆ ಇದೆ. ಈ ಬ್ಯಾನರ್ ಜೊತೆ ಸುದೀಪ್ ಅವರು ಸಿನಿಮಾ ಮಾಡಲಿರುವುದು ವಿಶೇಷ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಸುದೀಪ್ ಕೈ ಜೋಡಿಸಿದ್ದಾರೆ. ‘ವಿ ಕ್ರಿಯೇಷನ್ಸ್’ ಮೂಲಕ ಅವರ ಹೊಸ ಸಿನಿಮಾ ನಿರ್ಮಾಣ ಆಗಲಿದೆ. ಈ ಚಿತ್ರಕ್ಕೆ ಕಲೈಪುಲಿ ಎಸ್. ಥಾನು ಅವರು ಬಂಡವಾಳ ಹೂಡಿದ್ದಾರೆ.

