Raichur: ಕಲುಷಿತ ನೀರು (Polluted Water) ಸೇವಿಸಿದ ಪರಿಣಾಮ ಓರ್ವ ಮಗು (Boy) ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ನೀರು ಸರಬರಾಜು ಮಾಡುವ ಪೈಪ್ ಲೈನ್ ಗೆ ಚರಂಡಿ ನೀರು ಸೇರಿದ್ದ ಪರಿಣಾಮ ಕಳೆದ ಎರಡ್ಮೂರು ದಿನಗಳಿಂದಲೂ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಈ ನೀರು ಕುಡಿದು ಅಸ್ವಸ್ಥವಾಗಿದ್ದ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಅಲ್ಲದೇ, ಗ್ರಾಮದ 30ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಶುದ್ಧ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆಯನ್ನು ಗ್ರಾಮದಲ್ಲಿ ಕಲ್ಪಿಸಲಾಗಿದೆ.