ಬೆಂಗಳೂರು : ದೇಶದಲ್ಲಿ ಈ ವಾರವೂ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ (Gold and Silver Prices) ಮುಂದುವರಿದಿದೆ. ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಕೆ ಕಂಡಿದೆ.
ಅಮೆರಿಕ ಮತ್ತು ದುಬೈನಲ್ಲಿ ಚಿನ್ನದ ಬೆಲೆ 50 ಸಾವಿರ ರೂ.ಗಿಂತಲೂ ಕಡಿಮೆ ಮಟ್ಟಕ್ಕೆ ಇಳಿದಿದೆ. ಸಿಂಗಾಪುರ, ಕುವೇತ್ ನಲ್ಲೂ ಬೆಲೆ ನಿರೀಕ್ಷೆ ಮೀರಿ ಕುಸಿಯುತ್ತಿದೆ. ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,650 ರೂ. ಆಗಿದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,710 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,290 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 55,700 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,620 ರೂ. ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಆದರೆ, ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 27ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 729 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,920 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,850 ರಿಂಗಿಟ್ (51,183 ರುಪಾಯಿ)
ದುಬೈ: 2190 ಡಿರಾಮ್ (49,273 ರುಪಾಯಿ)
ಅಮೆರಿಕ: 595 ಡಾಲರ್ (49,211 ರುಪಾಯಿ)
ಸಿಂಗಾಪುರ: 819 ಸಿಂಗಾಪುರ್ ಡಾಲರ್ (50,044 ರುಪಾಯಿ)
ಕತಾರ್: 2,250 ಕತಾರಿ ರಿಯಾಲ್ (51,049 ರೂ)
ಓಮನ್: 238.50 ಒಮಾನಿ ರಿಯಾಲ್ (51,176 ರುಪಾಯಿ)
ಕುವೇತ್: 187 ಕುವೇತಿ ದಿನಾರ್ (50,232 ರುಪಾಯಿ)