Kornersite

Just In National Politics

ನೂತನ ಸಂಸತ್ ನ್ನು ಶವದ ಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ; ದೇಶದಲ್ಲಿ ಭುಗಿಲೆದ್ದ ಆಕ್ರೋಶ!

ನವದೆಹಲಿ : ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆಗೊಂಡಿದೆ. ಆದರೆ, ಈ ನೂತನ ಭವನವನ್ನು ರಾಷ್ಟ್ರೀಯ ಜನತಾ ದಳ (RJD) ಶವದ ಪೆಟ್ಟಿಗೆಗೆ ಹೋಲಿಕೆ ಮಾಡಿದೆ. ಇದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಗುಡುಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಪಕ್ಷಕ್ಕೆ ಯಾವುದೇ ನಿಲುವಿಲ್ಲ. ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಬೇರೆ ಉದಾಹರಣೆಯನ್ನು ಬೇಕಾದರೆ ಕೊಟ್ಟು ಬಿಜೆಪಿಯನ್ನು ಟೀಕಿಸಬೇಕಿತ್ತು. ಆದರೆ, ಶವದ ಪೆಟ್ಟಿಗೆಯ ಉದಾಹರಣೆ ನೀಡಿರುವುದು ಅಕ್ಷಮ್ಯ ಅಪರಾಧ. ಕೆಲವೊಮ್ಮೆ ಆ ಪಕ್ಷವು ಜಾತ್ಯತೀತವಾಗಿ ಮಾತನಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲೋಕಸಭೆಯ ಉಸ್ತುವಾರಿ ಸ್ಪೀಕರ್ ಅವರೇ ಹೊರತು ಪ್ರಧಾನಿ ಅಲ್ಲ. ಲೋಕಸಭೆಯು ಜನರಿಗೆ ಉತ್ತರದಾಯಿಯಾಗಿದೆ. ಇದನ್ನು ಸ್ಪೀಕರ್ ಉದ್ಘಾಟಿಸಿದ್ದರೆ ಉತ್ತಮ. ಆದರೆ, ಎಲ್ಲವನ್ನೂ ಮೋದಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು