ಮೈಸೂರು: ಇನ್ನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೊಳ್ಳೇಗಾಲದ ಟಿ.ನರಸೀಪುರ (T- Narasipura) ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಹತ್ತಿರ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತಿ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಹರ ಸಾಹಸ ಪಟ್ಟು ರಕ್ಷಿಸಿದ್ದಾರೆ. ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಸಾವನ್ನಪ್ಪಿದವರ ಕುರಿತು ಸಮರ್ಪಕ ಮಾಹಿತಿ ದೊರೆತಿಲ್ಲ. ನರಸೀಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.