Kornersite

Crime International Just In

ಪಾಕಿಸ್ತಾನದಲ್ಲಿ ನಡೆಯಿತು ಮರ್ಯಾದಾ ಹತ್ಯೆ; ಮಗಳನ್ನೇ ಜೀವಂತ ಸುಟ್ಟ ತಂದೆ!

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ತಂದೆಯೇ ಸುಟ್ಟಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ.

ಲಾಹೋರ್ ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇನ್ನಿತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ ಎನ್ನಲಾಗಿದೆ.

ಅಲ್ಲದೇ, ಇದಕ್ಕೂ ಮುಂತೆ ಚಿತ್ರಹಿಂಸೆ ನೀಡಿದ್ದಾರೆ ಎದು ತನಿಖಾಧಿಕಾರಿ ಮುಹಮ್ಮದ್ ಅಜಮ್ ತಿಳಿಸಿದ್ದಾರೆ. ಯುವತಿ ತನ್ನ ಪ್ರಿಯಕರನನ್ನು ಮದುವೆಯಾಗಲು ಬಯಸಿದ್ದಳು. ಹೀಗಾಗಿ ಹಿಂದಿನ ಮನೆಯಿಂದ ಹೋಗಿದ್ದಳು. ಅಲ್ಲದೇ, ಅಲ್ಲಿ ಅವಳು ಆತನೊಂದೆ ಸ್ವಲ್ಪ ಸಮಯ ಕಳೆದಿದ್ದಳು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಕುಟುಂಬಕ್ಕೆ ಅಗೌರವ ತಂದಿದ್ದಾಳೆ ಎಂದು ಕುಟಂಬ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಬಂಧಿಸಲಾಗಿದೆ.ಬಂಧಿತರು ತಮ್ಮ ದುಷ್ಕೃತ್ಯಕ್ಕೆ ಪಶ್ಚಾತ್ತಾಪ ಪಡುತಿಲ್ಲ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸಲು ಅಲ್ಲಿನ ಮಾಧ್ಯಮಗಳಿಗೆ ಹೇಳಿದ್ದಾರೆ ಎನ್ನಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ