ಬೆಂಗಳೂರು: ರಾಜ್ಯದಲ್ಲಿ ಜೂನ್ 2ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೆ ವ್ಯಾಪಕ ಮಳೆಯಾಗುವ ಸಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಕೂಡ ಗುಡುಗಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.