ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿದ್ದು(New Academic Year) ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಆಗಮಿಸುತ್ತಿದ್ದಾರೆ.. ಈ ನಿಟ್ಟಿನಲ್ಲಿ ಸರ್ಕಾರ(Karnataka Government) ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ(Mid Day Meals) ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.
ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಶಾಲೆ ಆವರಣವನ್ನು ಸ್ವಚ್ಛಗೊಳಿಸಲು ಮತ್ತು ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
2023-24ರ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಒಟ್ಟು 244 ದಿನ ಕಾರ್ಯನಿರ್ವಹಿಸಲಿವೆ. ಸೋಮವಾರದಿಂದ, ಶಾಲೆಗಳು ಅಕ್ಟೋಬರ್ 7 ರವರೆಗೆ ಕಾರ್ಯನಿರ್ವಹಿಸುತ್ತವೆ; ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ದಸರಾ ರಜೆಗಾಗಿ ಮುಚ್ಚಲಾಗುತ್ತದೆ. ಎರಡನೇ ಅವಧಿಯು ಅಕ್ಟೋಬರ್ 25 ರಂದು ಪ್ರಾರಂಭವಾಗಿ ಏಪ್ರಿಲ್ 10, 2024 ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.