ಶಹಜಹನ್ ಪುರ : ಮತಾಂತರಕ್ಕೆ ಒತ್ತಾಯಿಸಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಶಹಜಹನ್ ಪುರದಲ್ಲಿ ಬೆಳಕಿಗೆ ಬಂದಿದೆ.
ಪ್ರೇಮ ಪ್ರಕರಣದಲ್ಲಿ ಸಿಕ್ಕಿಬಿದ್ದು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಆರೋಪಿಗಳು ಒತ್ತಡ ಹೇರುತ್ತಿದ್ದ ಎನ್ನಲಾಗಿದ್ದು, ಸೀಮಾ ಗೌತಮ್ (24) ಲಖೀಂಪುರ ಖೇರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಾದ ನಾವೇದ್ ಮತ್ತು ಫರ್ಹಾನ್ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ಸಾವನ್ನಪ್ಪುತ್ತಿದ್ದಂತೆ ಪರಾರಿಯಾಗಿದ್ದರು. ಮಹಿಳೆಗೆ ವಿಷಪ್ರಾಶನ ಮಾಡಿದ್ದರು ಎನ್ನಲಾಗಿದೆ.
ದಂಪತಿ ಕಳೆದ ಒಂದೂವರೆ ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು ಮತ್ತು ಮಹಿಳೆ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಆರೋಪಿಗಳು ಧರ್ಮ ಬದಲಾಯಿಸುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದರು ಎಂದೂ ಪೊಲೀಸರು ಹೇಳಿದ್ದಾರೆ. ಮೃತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ನಾವೇದ್, ಮುಸ್ತಾಕಿಮ್ ಮತ್ತು ಫರ್ಹಾನ್ ವಿರುದ್ಧ ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಯ್ದೆ ಮತ್ತು ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವೇದ್ ಮತ್ತು ಫರ್ಹಾನ್ ಜೈಲಿನಲ್ಲಿದ್ದು, ಮತ್ತೊಬ್ಬ ಆರೋಪಿ ಮುಸ್ತಾಕಿಮ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.