ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮ ದಿನ ಇಂದು. ಹೀಗಾಗಿ ಗಣ್ಯರು ಸೇರಿದಂತೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಅಂಬರೀಶ್ ಹುಟ್ಟು ಹಬ್ಬಕ್ಕೆ (Birthday) ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ (Sumalatha) ಭಾವುಕ ಪತ್ರವೊಂದನ್ನು (Letter) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು ಎದು ಬರೆದಿದ್ದಾರೆ.
ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.