ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ್ ಅವರನ್ನ ನೇಮಕ ಮಾಡಲಾಗಿದೆ. ಈವರೆಗೆ ಬೆಂಗಳೂರು ಕಮಿಷನರ್ ಆಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಟ್ರಾಫಿಕ್ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂ ಸಲೀಂ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
