Kornersite

Bengaluru Just In Karnataka Politics State

ಜೂನ್ 1 ರಿಂದ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!

Bangalore : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾಗಿದ್ದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನಾಳೆಯೇ ಅನುಷ್ಠಾನಕ್ಕೆ ಬರಲಿದ್ದು, ಜೂನ್‌ 1ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ತರಲು ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನ ಇಲ್ಲ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಈ ಯೋಜನೆ ನೀಡುವುದಕ್ಕಾಗಿ ಪ್ರತಿ ವರ್ಷ ಅಂದಾಜು 3,200 ಕೋಟಿ ರೂ. ಖರ್ಚು ಹಣ ಬೇಕಾಗುತ್ತದೆ. ಸಾರಿಗೆ 4 ನಿಗಮ ನಷ್ಟದಲ್ಲಿವೆ. ಹೀಗಾಗಿ ಸರ್ಕಾರವು ಸಹಾಯಧನ ನೀಡಿದರೆ, ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಲು ನಿಗಮದ ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಹಲವು ನಿಗಮಗಳಿಂದ ಸಾವಿರಾರು ಕೋಟಿ ಹಣ ಬರಬೇಕಿದೆ ಎಂದು ಹೇಳಿದ್ದಾರೆ.

ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದ್ದು, 21,574 ವಾಹನಗಳನನ್ನು ಒಳಗೊಂಡಿವೆ. 4 ನಿಗಮಗಳಿಂದ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಈ ವರ್ಷ 4,500ಕ್ಕೂ ಅಧಿಕ ಬಸ್‌ಗಳು ಸೇರ್ಪಡೆಯಾಗುತ್ತಿವೆ. ಇನ್ನಷ್ಟು ಹೊಸ ಬಸ್‌ಗಳು ಬರಬೇಕಿದೆ. ಇದರಿಂದ ಪ್ರತಿದಿನ 82.51 ಲಕ್ಷ ಪ್ರಯಾಣಿಕರು ಓಡಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು