Kornersite

Bengaluru Karnataka State

ವಿದ್ಯುತ್ ಬಿಲ್ ಕಟ್ಟದಿದ್ದರೆ, ಕನೆಕ್ಷನ್ ಕಟ್; ಗ್ಯಾರಂಟಿ ಅಂತ ಹೇಳುವಂತಿಲ್ಲ!

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 200 ಯೂನಿಟ್‌ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿತ್ತು. ಅದರಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿತ್ತು. ಆದರೆ, ಈ ಯೋಜನೆ ಇನ್ನೂ ಅನುಷ್ಠಾನಗೊಂಡಿಲ್ಲ. ಅಷ್ಟರಲ್ಲಿಯೇ ವಿದ್ಯುತ್ ಬಿಲ್ ಪಾವತಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಹೀಗಾಗಿ ಜನರ ಮನವೊಲಿಸರು ಬೆಸ್ಕಾಂ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ. ಯೋಜನೆ ಅನುಷ್ಠಾನವಾಗುವವರೆಗೆ ನಿಗದಿತ ಸಮಯದೊಳಗೆ ಬಿಲ್ ಪಾವತಿಸುವಂತೆ ಬೆಸ್ಕಾಂ ಅಧಿಕಾರಿಗಳು ಸೂಚಿಸಿದ್ದಾರೆ, ಇಲ್ಲದಿದ್ದರೆ ನಿಯಮದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.

200 ಯೂನಿಟ್ ಉಚಿತ ವಿದ್ಯುತ್ ನೀಡುವ ಕುರಿತು ಸರ್ಕಾರದಿಂದ ಸ್ಪಷ್ಟತೆ ಇಲ್ಲದಿರುವುದರಿಂದ ಗ್ರಾಹಕರಿಗೆ ನಮ್ಮ ಬಳಿ ಉತ್ತರವಿಲ್ಲ. ಬಿಲ್ ಪಾವತಿಸಲು ನಿರಾಕರಿಸುವವರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ನಾವು ಹೇಳುತ್ತೇವೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬೆಸ್ಕಾಂ ಸರ್ಕಾರದಿಂದ ಯಾವುದೇ ಸಂವಹನವನ್ನು ಸ್ವೀಕರಿಸಿಲ್ಲ. ಶೀಘ್ರದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಮಗೆ ತಿಳಿಸಲಾಗಿದೆ. ಇದನ್ನು ನಾವು ಗ್ರಾಹಕರಿಗೆ ಹೇಳಲು ಸಾಧ್ಯವಿಲ್ಲ. ಈ ಬಾರಿ ಬಿಲ್ ಕಟ್ಟಿ ಎಂದು ನಾವು ಹೇಳುತ್ತಿದ್ದೇವೆ. ನಾಗರಿಕರು ಕೇಳಿದರೂ ನಾವು ಅಸಹಾಯಕರಾಗಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ