Kornersite

Just In Sports

IPL: ಬಲಿಷ್ಠ ಗುಜರಾತ್ ಗೆ ಮಣ್ಣು ಮುಕ್ಕಿಸಿ, ಟ್ರೋಫಿ ಎತ್ತಿ ಹಿಡಿದ ಧೋನಿ; ಮುಂಬಯಿ ದಾಖಲೆ ಸರಿಗಟ್ಟಿದ ಚೆನ್ನೈ!

ಅಹಮದಾಬಾದ್‌: ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಪಟ್ಟಕ್ಕೆ ಏರಿದೆ.

ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಆಗಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ (GT) ತಂಡಕ್ಕೆ ಸೋಲಿನ ಆಘಾತ ನೀಡಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ 5 ಬಾರಿ ಐಪಿಎಲ್‌ ಕಪ್‌ ಗೆದ್ದಿದ್ದ ಮುಂಬಯಿ ಇಂಡಿಯನ್ಸ್‌ ದಾಖಲೆ ಸರಿಗಟ್ಟಿದೆ.

ಗುಜರಾತ್‌ ಟೈಟಾನ್ಸ್‌ ತಾನು ಆಡಿದ 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಚೆನ್ನೈ ತಂಡದಲ್ಲಿ ಸ್ಟಾರ್‌ ಆಟಗಾರನಾಗಿ ಮಿಂಚಿದ್ದ ಅಂಬಾಟಿ ರಾಯುಡು (Ambati Rayudu) ಗೆಲುವಿನೊಂದಿಗೆ ಐಪಿಎಲ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 250 ಪಂದ್ಯವನ್ನಾಡಿದ ಸಾಧನೆ ಮಾಡಿದ ಎಂ.ಎಸ್‌ ಧೋನಿ ಅವರು ಕೂಡ ವಿದಾಯ ಹೇಳುವ ಸಾಧ್ಯತೆ ದಟ್ಟವಾಗಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ಬರೋಬ್ಬರಿ 214 ರನ್‌ ಗಳಿಸಿತ್ತು. ಬೃಹತ್ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌ ಮೂರು ಎಸೆತಗಳನ್ನು ಎದುರಿಸುತ್ತಿದ್ದಂತೆಯೇ ಮಳೆರಾಯನ ಕಾಟ ಶುರುವಾಯಿತು. ಹೀಗಾಗಿ ಡಕ್ವರ್ತ್‌ ಲೂಯಿಸ್ ನಿಯಮ ಅನ್ವಯಿಸಿ, ಓವರ್‌ ಗಳನ್ನು ಕಡಿತ ಮಾಡಲಾಯಿತು. ಡಕ್ವರ್ತ್‌ ಲೂಯಿಸ್‌ (DSL) ನಿಯಮದ ಪ್ರಕಾರ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಚೆನ್ನೈ 15 ಓವರ್‌ಗಳಲ್ಲಿ 171 ರನ್‌ ಗಳನ್ನು ಗಳಿಸಿ ಗೆಲುವಿನ ಪತಾಕೆ ಹಾರಿಸಿತು.

ಚೆನ್ನೈಗೆ ಕೊನೆಯ 20 ಎಸೆತಗಳಲ್ಲಿ 50 ರನ್‌ ಗಳ ಅಗತ್ಯವಿತ್ತು. ಇತ್ತ ರಶೀದ್‌ ಖಾನ್‌ ಬೌಲಿಂಗ್‌ ನ ಕೊನೆಯ ಎರಡು ಎಸೆತಗಳನ್ನು ಶಿವಂ ದುಬೆ (Shivam Dube) ಭರ್ಜರಿ ಸಿಕ್ಸರ್‌ ಸಿಡಿಸಿದರು. ಹೀಗಾಗಿ ಕೊನೆಯ 18 ಎಸೆತಗಳಲ್ಲಿ 38 ರನ್‌ ಗಳು ಬೇಕಾದವು. ಅಂಬಾಟಿ ರಾಯುಡು, ಮೋಹಿತ್‌ ಶರ್ಮಾ ಬೌಲಿಂಗ್‌ನ ಮೊದಲ ಮೂರು ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಸಿಡಿಸಿದರು. ಇದರಿಂದ ಕಠಿಣ ಪರಿಸ್ಥಿತಿಯಲ್ಲಿದ್ದ ಚೆನ್ನೈಗೆ ಜೀವ ಬಂದಂತಾಯಿತು.

ಕೊನೆಯ ಓವರ್ ನಲ್ಲಿ ಚೆನ್ನೈಗೆ ಗೆಲ್ಲಲು 13 ರನ್‌ ಗಳು ಬೇಕಾಗಿದ್ದವು. ಮೋಹಿತ್‌ ಶರ್ಮಾ ಬೌಲಿಂಗ್‌ ಮಾಡುತ್ತಿದ್ದರು. ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ಗಳನ್ನು ಮಾತ್ರ ಚೆನ್ನೈ ಗಳಿಸಿತು. 5ನೇ ಎಸೆತದಲ್ಲಿ ಸಿಕ್ಸ್‌ ಬಾರಿಸಿದ ಜಡೇಜಾ 6ನೇ ಎಸೆತದಲ್ಲಿ ಬೌಂಡರಿ ಚಚ್ಚುವ ಮೂಲ ಗೆಲುವು ತಂದುಕೊಟ್ಟರು.

ಋತುರಾಜ್‌ ಗಾಯಕ್ವಾಡ್‌ ಹಾಗೂ ಡಿವೋನ್‌ ಕಾನ್ವೆ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿತು. ಮೊದಲ ವಿಕೆಟ್‌ಕೆ ಈ ಜೋಡಿ 6.3 ಓವರ್‌ಗಳಲ್ಲಿ ಭರ್ಜರಿ 74 ರನ್‌ ಗಳಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ ದೊಡ್ಡ ಹೊಡೆತ ಹೊಡೆಯಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಋತುರಾಜ್‌ 16 ಎಸೆತಗಳಲ್ಲಿ 26, ಡಿವೋನ್‌ ಕಾನ್ವೆ ಸಹ 47 ರನ್‌, ಅಜಿಂಕ್ಯಾ ರಹಾನೆ 13 ಎಸೆತಗಳಲ್ಲಿ ಸ್ಫೋಟಕ 27, ಅಂಬಾಟಿ ರಾಯುಡು 19 ರನ್‌, ಶಿವಂ ದುಬೆ ಅಜೇಯ 32 ರನ್‌, ರವೀಂದ್ರ ಜಡೇಜಾ 15 ರನ್‌ ಗಳಿಸಿ ಕ್ರೀಸ್ ನಲ್ಲಿ ಉಳಿದರು.

ಗುಜರಾತ್ ಪರ ಶುಭಮನ್‌ ಗಿಲ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ ಜೊತೆಯಾಟಕ್ಕೆ 42 ಎಸೆತಗಳಲ್ಲಿ 67 ರನ್‌ ಗಳಿಸಿತ್ತು. ಗಿಲ್‌, ಧೋನಿ ಮ್ಯಾಜಿಕ್‌ ಸ್ಟಂಪ್‌ಗೆ ವಿಕೆಟ್‌ ಒಪ್ಪಿಸಲೇಬೇಕಾಯಿತು. ನಂತರ ಸಾಹಿ ಸುದರ್ಶನ್‌ ಹಾಗೂ ವೃದ್ಧಿಮಾನ್‌ ಸಾಹಾ ಜೋಡಿ 42 ಎಸೆತಗಳಲ್ಲಿ 64 ರನ್‌ ಗಳಿಸಿದರು. ಸುದರ್ಶನ್‌ ಹಾಗೂ ಹಾರ್ದಿಕ್‌ ಪಾಂಡ್ಯ ಜೋಡಿ 33 ಎಸೆತಗಳಲ್ಲಿ ಸ್ಫೋಟಕ 81 ರನ್‌ ಗಳಿಸಿದರು. ಹೀಗಾಗಿ ಮೊದಲ 10 ಓವರ್‌ ಗಳಲ್ಲ ಒಂದು ವಿಕೆಟ್‌ ಕಳೆದುಕೊಂಡು ಕೇವಲ 86 ರನ್‌ ಕಲೆಹಾಕಿದ್ದ ಟೈಟಾನ್ಸ್‌ ಮುಂದಿನ 10 ಓವರ್‌ಗಳಲ್ಲಿ 128 ರನ್‌ ಗಳಿಸುವ ಮೂಲಕ ತಂಡದ ಮೊತ್ತ 200ರ ಗಡಿ ದಾಟಿತು. ಚೆನ್ನೈ ಮಹೇಶ್‌ ಪತಿರಣ 2 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಹಾಗೂ ದೀಪಕ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್