Kornersite

Just In Sports

MS Dhoni: 5ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿ ನಿವೃತ್ತಿ ಬಗ್ಗೆ ಮಾತನಾಡಿದ ಧೋನಿ!

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ.

ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ ಸಾಲಿನಲ್ಲಿ ಚೆನ್ನೈ, ಮುಂಬಯಿ ಇಂಡಿಯನ್ಸ್ ಜೊತೆ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಸಿಎಸ್ ಕೆ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಸಿಎಸ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿತ್ತು. ಈ ಕುರಿತು ಧೋನಿ ಬಳಿ ಕೇಳಿದಾಗ ಸ್ಪಷ್ಟ ಉತ್ತರ ಬಂದಿರಲಿಲ್ಲ. ಸದ್ಯ ಫೈನಲ್ ಪಂದ್ಯ ಮುಗಿದ ನಂತರ ಎಲ್ಲ ಗೊಂದಲಗಳಿಗೆ ಧೋನಿ ತೆರೆ ಎಳೆದಿದ್ದಾರೆ.

ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದ್ದಾರೆ.. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಮೊದಲ ಪಂದ್ಯ ಆಡುವಾಗ ಎಲ್ಲರೂ ನನ್ನ ಹೆಸರನ್ನು ಕೂಗುತ್ತಿದ್ದರು. ಆಗ ನನ್ನ ಕಣ್ಣುಗಳು ಒದ್ದೆಯಾಗಿದ್ದವು. ಹೀಗಾಗಿ ಡಗೌಟ್‌ನಲ್ಲಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ ಎಂದು ಧೋನಿ ಭಾವುಕರಾಗಿ ನುಡಿದಿದ್ದಾರೆ. ಅಭಿಮಾನಿಗಳ ಈ ಪ್ರೀತಿಯನ್ನು ಆನಂದಿಸಬೇಕು ಎಂದು ನಾನು ಅರಿತುಕೊಂಡಿದ್ದೇನೆ. ಇಂದು ನಾನು ಏನಾಗಿದ್ದೇನೆ ಅದಕ್ಕೆ ಮೂಲ ಕಾರಣವೇ ಅಭಿಮಾನಿಗಳ ಪ್ರೀತಿ. ಅಭಿಮಾನಿಗಳು ನನ್ನ ವೃತ್ತಿ ಜೀವನದ ಪ್ರಮುಖ ಭಾಗ ಎಂದು ಧೋನಿ ಹೇಳಿದ್ದಾರೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್