Kornersite

Bengaluru Just In Karnataka Politics State

ಗ್ಯಾರಂಟಿ ಬೇಕೆ ಬೇಕು ಎಂದು ಪಂಚ್ ನೀಡುತ್ತಿರುವ ಜನರು; ಪಂಚದಲ್ಲಿ ಮೂರು ಸದ್ಯದಲ್ಲಿಯೇ ಜಾರಿ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಈಗ ಸರ್ಕಾರದ ಮುಂದೆ ಇದೆ.
ಆದರೆ, ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ (Karnataka Government) ಮುಂದಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ ಸಚಿವರು ಅಧಿಕಾರಿಗಳ ಜೊತೆ ಸಭೆ ಈಗಾಗಲೇ ನಡೆದಿದೆ. ಇನ್ನುಳಿದ ಎರಡು ಗ್ಯಾರಂಟಿ ವ್ಯಾಪ್ತಿಯ ಇಲಾಖೆಗಳ ಸಭೆ ನಡೆದಿಲ್ಲ ಎನ್ನಲಾಗಿದೆ.
ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಆಹಾರ ಖಾತೆಯ ಸಚಿವ ಮುನಿಯಪ್ಪ ಸಭೆಯ ವರದಿಯನ್ನು ಸಿಎಂಗೆ ಒಪ್ಪಿಸಲಿದ್ದಾರೆ.
ಗೃಹಜ್ಯೋತಿ : ಎಲ್ಲಾ ಮನೆಗಳಿಗೂ 200 ಯೂನಿಟ್‌ ಉಚಿತ ವಿದ್ಯುತ್‌
ಗೃಹಲಕ್ಷ್ಮಿ : ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ.
ಅನ್ನಭಾಗ್ಯ : ಬಿಪಿಎಲ್‌ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ
ಯುವನಿಧಿ : ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ – ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ.
ಉಚಿತ ಪ್ರಯಾಣ: ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು