ರಾಜ್ಯದಲ್ಲಿ 48 ಗಂಟೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿಯೇ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವು ಕಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗು ಮಳೆಯಾಗಲಿದ್ದು, ಗಾಳಿಯು 40ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.