Kornersite

Bengaluru Just In Karnataka State

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ; ಬೆಳ್ಳಂ ಬೆಳಿಗ್ಗೆ ಶಾಕ್!

ಬೆಂಗಳೂರು: ಲೋಕಾಯುಕ್ತ (Lokayukta)ಅಧಿಕಾರಿಗಳ ತಂಡವು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರು, ಹಾವೇರಿ (Haveri), ಶಿವಮೊಗ್ಗ (Shivamogga) ಹಾಗೂ ತುಮಕೂರಿನ (Tumakuru) ಹಲವು ಪ್ರದೇಶಗಳಲ್ಲಿ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಸ್ಕಾಂನ ಟೆಕ್ನಿಕಲ್ ನಿರ್ದೇಶಕ ರಮೇಶ್ ಅವರ ಬಸವೇಶ್ವರ ನಗರದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆಯ ಉಪನಿರ್ದೇಶಕ ಟಿವಿ ನಾರಾಯಣಪ್ಪ ಅವರ ಮನೆ ಮೇಲೆ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಅವರ ರಾಣೇಬೆನ್ನೂರಿನಲ್ಲಿರುವ (Ranebennuru )ಮನೆ ಮತ್ತು ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿಯವರ ಆರ್‍ಟಿ ನಗರದ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ತುಂಗಾ ಮೇಲ್ದಂಡೆ ಯೋಜನೆಯ ಇಂಜಿನಿಯರ್ ಪ್ರಶಾಂತ್ ಮನೆ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಅಧಿಕಾರಿಯೊಬ್ಬರ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಲ್ಲೆಡೆ ಅಧಿಕಾರಿಗಳು ತಂಡವು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ