Kornersite

Bengaluru Just In Karnataka State

ಬೆಂಗಳೂರು ಟ್ರಾಫಿಕ್ ಜಾಮ್; ಬಸ್ಸಿನಲ್ಲಿಯೇ ಕುಳಿತು ಊಟ ಮಾಡಿದ ಚಾಲಕ!

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿಯೇ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ ಎಂದರೆ ಈಗಾಗಲೇ ಬೆಂಗಳೂರು ಟ್ರಾಫಿಕ್ ಜಾಮ್ ಕುರಿತು ಸಾಕಷ್ಟು ಜೋಕ್ ಗಳು, ಶಾರ್ಟ್ ಸ್ಟೋರಿ ವಿಡಿಯೋಗಳು ಹರಿದಾಡುತ್ತಿವೆ. ಹುಡುಗನೋರ್ವ ಬೆಂಗಳೂರು ಟ್ರಾಫಿಕ್ ನಲ್ಲಿ ಯುವತಿಯೊಬ್ಬಳನ್ನು ನೋಡಿ ಆಕೆಯನ್ನು ಅಲ್ಲೇ ಪ್ರೀತಿ, ಮದುವೆಯಾಗಿ ಮಕ್ಕಳಾದರೂ ಟ್ರಾಫಿಕ್ ಮಾತ್ರ ಕ್ಲಿಯರ್ ಆಗಿರಲಿಲ್ಲ ಎಂಬ ಜೋಕ್ ಗಳು ಈಗಾಗಲೇ ಸಾಕಷ್ಟು ಖ್ಯಾತಿ ಪಡೆದಿವೆ.

ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸೆರೆಹಿಡಿದ ವಿಡಿಯೋವನ್ನು ಸಾಯಿಚಂದ್ ಶಬರೀಶ್ ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ನಲ್ಲಿ ಅಪ್‌ಲೋಡ್ ಮಾಡಿದ್ದು, ಮೇ 2 ರಂದು ‘ಬೆಂಗಳೂರಿನ ಪೀಕ್ ಟ್ರಾಫಿಕ್ ಮೊಮೆಂಟ್’ ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.
ಇದಕ್ಕೆ ಹಲವಾರು ನೆಟಿಜನ್‌ಗಳು ಪ್ರತಿಕ್ರಿಯಿಸಿದ್ದು, ಬೆಂಗಳೂರು ಟ್ರಾಫಿಕ್‌ನಲ್ಲಿ ತಾವು ಪಟ್ಟ ಪಾಡನ್ನು ವಿವರಿಸಿದ್ದಾರೆ ಮತ್ತು ಅನೇಕರು ಚಾಲಕನ ಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ