Kornersite

Crime Just In National

Crime News: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ 10 ಜನ ಭಕ್ತರು ಸಾವು!

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಝಜ್ಜರ್ ಕೋಟ್ಲಿಯಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮೃತರನ್ನು ಬಿಹಾರದ ಲಖಿ ಸರಾಯ್ ಮತ್ತು ಬೇಗುಸರಾಯ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ.

ಸಿಆರ್‌ಪಿಎಫ್ ಅಧಿಕಾರಿ ಅಶೋಕ್ ಚೌಧರಿ ಈ ವಿಷಯವಾಗಿ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಹೊರ ತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಯಾತ್ರಾರ್ಥಿಗಳು ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ಹೇಲಿದ್ದಾರೆ.
ಕತ್ರಾವು ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ತೀರ್ಥಯಾತ್ರೆಯ ಮೂಲ ಶಿಬಿರವಾಗಿದೆ. ಸದ್ಯದ ಮಾಹಿತಿಯಂತೆ 20 ಜನ ಗಾಯಗೊಂಡಿದ್ದಾರೆ ಎಂದು ಜಮ್ಮುವಿನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ