Kornersite

Bengaluru Just In Karnataka State

ತಳಿರು ತೋರಣಗಳಿಂದ ಸಿಂಗಾರಗೊಂಡ ಶಾಲೆಗಳು; ವಿದ್ಯಾರ್ಥಿಗಳಿಗೆ ಸಿಹಿ ಕೊಟ್ಟು ಸ್ವಾಗತ!

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.
ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ ಹಂಚಿ ಶಾಲಾ ಸಿಬ್ಬಂದಿ ಬರಮಾಡಿಕೊಂಡಿದ್ದಾರೆ. ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಎಲ್ಲ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಕಾಂಪೌಂಡ್‌, ಆವರಣ ಎಲ್ಲವನ್ನೂ ಕೆಲವು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರ ಜೊತೆಗೂಡಿ ಶಿಕ್ಷಕರು ಸ್ವಚ್ಛ ಮಾಡಿದ್ದಾರೆ.

ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಎಲ್ಲ ಶಾಲೆಗಳಿಗೆ ಸೂಚಿಸಲಾಗಿತ್ತು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ