ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಇದು ಶಾಲೆ ಮತ್ತು ಕಾಲೇಜುಗಳಿಗೆ ಅನ್ವಯವಾಗಲಿದೆ.
ಉಚಿತ, ರಿಯಾಯಿತಿ ಬಸ್ ಪಾಸ್ ಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಕೆಲವು ದಿನಗಳ ಕಾಲ ಈ ಆದೇಶ ಹೊರಡಿಸಲಾಗಿದೆ.