Kornersite

Bengaluru Just In Karnataka State

ವೀಕೆಂಡ್ ವಿತ್ ರಮೇಶ ಹಾಟ್ ಚೇರ್ ನಲ್ಲಿ ಈ ಬಾರಿ ಡಿಕೆಶಿ!?

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ ಡಿಕೆಶಿ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಭರ್ಜರಿ ರಾಜಕೀಯ ಜೀವನ ಅನುಭವಿಸುತ್ತಿರುವ ಹಾಗೂ ಅನುಭವಿಸಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ. ಹಿಂದಿನ ವೀಕೆಂಡ್ನಲ್ಲಿ ನಟ ಜೈಜಗದೀಶ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು ಅತಿಥಿಗಳಾಗಿ ಆಗಮಿಸಿದ್ದರು. ಆದರೆ, ಈ ವಾರ ಯಾರು ಎಂಬುವುದನ್ನು ಜೀ ಕನ್ನಡ ವಾಹಿನಿ ಬಹಿರಂಗಗೊಳಿಸಿಲ್ಲ. ಮಂಗಳವಾರದಂದು ಮುಂದಿನ ವೀಕೆಂಡ್ನ ಅತಿಥಿ ಯಾರೆಂಬ ಪ್ರೋಮೋ ಬಿಡುಗಡೆ ಮಾಡಲಾಗುತ್ತದೆ. ಆದರೆ ಈ ಬಾರಿ ಯಾವುದೇ ಪ್ರೋಮೋ ಆಗಲಿ, ಸುಳಿವು ಬಿಟ್ಟುಕೊಡುವ ಫೋಟೊಗಳನ್ನಾಗಲಿ ಜೀ ಕನ್ನಡ ಹಂಚಿಕೊಂಡಿಲ್ಲ.

ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಈ ಬಾರಿ ವೀಕೆಂಡ್ ವಿತ್ ರಮೇಶ್ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಎಪಿಸೋಡ್ನ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಇದೇ ವಾರಾಂತ್ಯಕ್ಕೆ ಎರಡು ದಿನಗಳ ಕಾಲ ಡಿ.ಕೆ.ಶಿವಕುಮಾರ್ ಎಪಿಸೋಡ್ ಪ್ರಸಾರವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ರಾಜಕೀಯ ನಾಯಕರು ಎಪಿಸೋಡ್ನಲ್ಲಿ ನೇರವಾಗಿ ಹಾಗೂ ವಿಡಿಯೋ ಮೂಲಕ ಭಾಗವಹಿಸಲಿದ್ದಾರೆ.

ಬಾಲ್ಯ, ಅವರ ಕುಟುಂಬ, ಶಿಕ್ಷಣ, ಕಾಲೇಜು ದಿನಗಳು, ಹೋರಾಟ, ಕಾಂಗ್ರೆಸ್ ಪಕ್ಷ ಸೇರ್ಪಡೆ, ಮೊದಲ ಚುನಾವಣೆ ಸೋಲು, ದೇವೇಗೌಡರನ್ನು ಸೋಲಿಸಿದ್ದು, ದೊಡ್ಡ ರಾಜಕಾರಣಿಗಳ ಸಖ್ಯ, ರಾಜಕೀಯದ ಪಟ್ಟುಗಳು. ಸಿಬಿಐ, ಇಡಿ, ಐಟಿ ಪ್ರಕರಣಗಳು ಈ ಸಂದರ್ಭದಲ್ಲ ಚರ್ಚೆಯಾಗಿವೆ ಎನ್ನಲಾಗುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ