Kornersite

Bengaluru Just In Karnataka Politics State

ಮನೆಯ ಯಜಮಾನಿಗೆ 2 ಸಾವಿರ ರೂ. ಅರ್ಜಿ ಹೇಗೆ ಸಲ್ಲಿಸಬೇಕು? ನಿಯಮ ಇಲ್ಲಿದೆ ನೋಡಿ!

ಬೆಂಗಳೂರು: ಕಾಂಗ್ರೆಸ್ (Congress) ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ 5 ಗ್ಯಾರಂಟಿಗಳನ್ನು (Guarantee)ಸಿಎಂ ಸಿದ್ದರಾಮಯ್ಯ (Siddaramaiah) ಶುಕ್ರವಾರ ಘೋಷಿಸಿದ್ದಾರೆ.

ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯೂ (Gruha Lakshmi Scheme) ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಮನೆ ಯಜಮಾನಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ನೀಡುತ್ತೇವೆ. ಇದಕ್ಕಾಗಿ ಮನೆ ಯಜಮಾನಿ ಯಾರು ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕು ಹಾಗೂ ಅವರ ಬಳಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೊದಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು. ಮನೆಯ ಯಜಮಾನಿ ಯಾರು ಎಂಬುವುದನ್ನು ಫಲಾನುಭವಿ ಮನೆಯವರೇ ಉಲ್ಲೇಖಿಸಬೇಕು. ಈ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಬೇಕು. ಜೂನ್ 15 ರಿಂದ ಜುಲೈ 15 ರ ಅವಧಿಯಲ್ಲಿ ಅರ್ಜಿ ಹಾಕಬೇಕು. ಈ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ ಎಂದು ಹೇಳಿದ್ದಾರೆ.

ಮನೆಯ ಯಜಮಾನಿ ಅತ್ತೆಯೋ ಅಥವಾ ಸೊಸೆಯೋ ಎಂಬುವುದನ್ನು ಆಯಾ ಮನೆಯವರೇ ಅರ್ಜಿಯಲ್ಲಿ ಉಲ್ಲೇಖಿಸಿ, ಸಂಬಂಧಿಸಿದ ದಾಖಲಾತಿ ಸಲ್ಲಿಸಬೇಕು. ಆದರೆ ಆಕೆಗೆ 18 ವರ್ಷ ತುಂಬಿರಬೇಕು. ಆಗಸ್ಟ್ 15 ಕ್ಕೆ ಕುಟುಂಬ ಯಜಮಾನಿಯ ಖಾತೆಗೆ ಹಣ ಬರುತ್ತದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರು ಎಲ್ಲರೂ ಇದಕ್ಕಾಗಿ ಅರ್ಜಿ ಹಾಕಬಹುದು. ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರಿಗೂ ಗೃಹಲಕ್ಷ್ಮಿ ಈ ಯೋಜನೆಯ ಲಾಭ ಸಿಗುತ್ತದೆ. ಅಂಗವಿಕಲ, ವಿಧವಾವೇತನ ಸೇರಿ ಸಾಮಾಜಿಕ ಭದ್ರತೆ ಪಿಂಚಣಿ ಪಡೆಯುವವರಿಗೂ ಇದು ಅನ್ವಯವಾಗುತ್ತದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು