ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸಲು ಸೂಚಿಸಿದ್ದಕ್ಕೆ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಮಹಿಳೆಯೊಬ್ಬರು ಹೈಡ್ರಾಮಾ ಮಾಡಿರುವ ಘಟನೆ ಮುಂಬಯಿ ಅಂತಾರಾಷ್ಟ್ರೀಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ನಡೆದಿದೆ.
ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಹೀಗಾಗಿ ಕೆಲವು ಹೊತ್ತು ವಿಮಾನ ನಿಲ್ದಾಣದಲ್ಲಿ ಕೆಲವು ಗಂಟೆಗಳ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಹೀಗಾಗಿ ಮಹಿಳೆ ವಿರುದ್ಧ ಜೀವ ಮತ್ತು ಇತರರ ಸುರಕ್ಷತೆಗೆ ಧಕ್ಕೆ ಆರೋಪದ ಮೇಲೆ ಎಫ್‍ಐಆರ್ (FIR) ದಾಖಲಿಸಲಾಗಿದೆ. ಕೋರ್ಟ್ ಮುಂದೆ ಹಾಜರುಪಡಿಸಿ ಮಹಿಳೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಹರ್ ಪೊಲೀಸರು ತಿಳಿಸಿದ್ದಾರೆ.