Kornersite

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಸೇವೆ; ಈ ನಿಯಮಗಳು ಇವೆ ನೋಡಿ!

ಬೆಂಗಳೂರು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಾನೂ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಹೇಳಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲೇ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಕೊನೆಗೂ ಒಪ್ಪಿಗೆ ಸೂಚಿಸಿದೆ.

ಕ್ಯಾಬಿನೆಟ್‌ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಹಾಗೂ ಶಕ್ತಿ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದೆ. ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ) ಜೂನ್‌ 11 ರಿಂದ ಜಾರಿಗೆ ಬರಲಿದೆ.

ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ರಾಜ್ಯದ ಎಲ್ಲ ಮಹಿಳೆಯರಿಗೆ ಜೂನ್‌ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್‌ ಪ್ರೆಸ್, ರಾಜಹಂಸ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ (ಎಸಿ ಬಸ್, ಐಶಾರಾಮಿ ಬಸ್,ಎಸಿ ಸ್ಲೀಪರ್,ರಾಜಹಂಸ ಬಸ್ ಗೆ ಉಚಿತ ಪ್ರಯಾಣ ಅನ್ವಯ ಇಲ್ಲ) ಬಸ್‌ ಗಳಲ್ಲಿ ಉಚಿತ ಪ್ರಯಾಣ (Free Bus For Women)ಕ್ಕೆ ಅವಕಾಶ ನೀಡಲಾಗಿದೆ.

ಆದರೆ, ಇನ್ನು ಮುಂದೆ ಸಾರಿಗೆ ಬಸ್ ಗಳಲ್ಲಿ ಶೇ. 50ರಷ್ಟು ಆಸನ ಪುರುಷರಿಗೆ ಮೀಸಲಾಗಿರುತ್ತೆ. ಇಡೀ ಬಸ್‌ನಲ್ಲಿ ಪೂರ್ಣ ಮಹಿಳೆಯರೇ ಹೋಗುವಂತಿಲ್ಲ. ಜೊತೆಗೆ BMTCಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಪ್ರತ್ಯೇಕ ಸೀಟು ಮೀಸಲಾತಿ ಇರುವುದಿಲ್ಲ. ಬೆಂಗಳೂರಿನಿಂದ ಬೆಳಗಾವಿಗೂ ಹೋಗಬಹುದು. ಆದರೆ, ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಹೋಗಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು