ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. 5 ಗ್ಯಾರಂಟಿ ಘೋಷಣೆ ಮಾಡಿ ನಾನು ಮತ್ತು ಅಧ್ಯಕ್ಷರು ಗ್ಯಾರಂಟಿ ಕಾರ್ಡ್‌ಗೆ ಸಹಿ ಹಾಕಿದ್ದೇವು. ಗ್ಯಾರಂಟಿಯಾಗಿ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಕಾರ್ಯಕರ್ತರ ಮೂಲಕ ಎಲ್ಲ ಮನೆಗೆ ಕಾರ್ಡ್ ಕೊಟ್ಟಿದ್ದೇವು.
ವಿರೋಧ ಪಕ್ಷದವರು ಹಲವು ಟೀಕೆ ಮಾಡಿದ್ದಾರೆ. ಸರ್ಕಾರ ರಚನೆ ಆದ ಮೇಲೆ ಪ್ರಮಾಣ ಸ್ವೀಕಾರ ಮಾಡಿದ ಬಳಿಕ ಅವತ್ತೇ ತಾತ್ವಿಕ ಒಪ್ಪಿಗೆ ಕೊಟ್ಟಿದ್ವಿ. ಅಂದೇ 5 ಗ್ಯಾರಂಟಿ ಜಾರಿ ಮಾಡ್ತೀವಿ ಅಂತ ಹೇಳಿದ್ವಿ. ಈಗ ಸುದೀರ್ಘವಾಗಿ ಗ್ಯಾರಂಟಿ ಬಗ್ಗೆ ಚರ್ಚೆ ಆಗಿದೆ. 5 ಗ್ಯಾರಂಟಿಯನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.