ಬೆಂಗಳೂರು : ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಮತ್ತೆ ಏರಿಕೆಯ ಹಾದಿ ಹಿಡಿದಿವೆ. ಈ ವಾರದಲ್ಲಿ ಮೂರು ಬಾರಿ ಬೆಲೆ ಏರಿಕೆಯಾಗಿದೆ. ವಿದೇಶಗಳ ಎಲ್ಲ ಮಾರುಕಟ್ಟೆಗಳಲ್ಲಿಯೂ ಚಿನ್ನದ ಬೆಲೆ ಏರಿಕೆಯಾಗಿದೆ.
ಅಮೆರಿಕದಲ್ಲಿ ಚಿನ್ನದ ಬೆಲೆ 50 ಸಾವಿರಕ್ಕಿಂತಲೂ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56 ಸಾವಿರ ರೂ. ಆಗಿದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 61,100 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,340 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,050 ರುಪಾಯಿ ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,450 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 3ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,100 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಮಲೇಷ್ಯಾ: 2,890 ರಿಂಗಿಟ್ (51,972 ರುಪಾಯಿ)
ದುಬೈ: 2220 ಡಿರಾಮ್ (49,758 ರುಪಾಯಿ)
ಅಮೆರಿಕ: 610 ಡಾಲರ್ (50,214 ರುಪಾಯಿ)
ಸಿಂಗಾಪುರ: 828 ಸಿಂಗಾಪುರ್ ಡಾಲರ್ (50,637 ರುಪಾಯಿ)
ಕತಾರ್: 2,285 ಕತಾರಿ ರಿಯಾಲ್ (51,662 ರೂ)
ಓಮನ್: 242 ಒಮಾನಿ ರಿಯಾಲ್ (51,743 ರುಪಾಯಿ)
ಕುವೇತ್: 189 ಕುವೇತಿ ದಿನಾರ್ (50,587 ರುಪಾಯಿ)