ಒಡಿಶಾ ರೈಲು ಅಪಘಾತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬೇರೆ ಕಾರ್ಯಕ್ರಮಗಳನ್ನ ರದ್ದು ಪಡಿಸಿ, ಒಧಿಶಾ ರೈಲು ದುರಂತದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಈಗಾಗಲೇ ಅಪಘಾತದವಾದ ಸ್ಥಳದಿಂದ ಹೋಗಬೇಕಿದ್ದ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ದುರಂತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವುದು ತಿಳಿದು ಬಂದಿದೆ. 5 ಎನ್ ಡಿ ಆರ್ ಎಫ್, 200 ಪೊಲೀಸ್ ಸಿಬ್ಬಂಧಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಅಧಿಕಾರಿಗಳ ಸಭೆ ನಡೆಸಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇನ್ನು ದುರಂತ ನಡೆದ ಸ್ಥಳಕ್ಕೆ ನರೇಂದ್ರ ಮೋದಿ ಅವರು ಭೇಟಿ ನೀಡುವ ಸಾಧ್ಯತೆ ಕೂಡ ಇದೆ. ಅಷ್ಟೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ.