ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಘಟನೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 650ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚುತ್ತಲೇ ಇದೆ. ಬೆಂಗಳೂರು-ಹೌರಾ ಎಕ್ಸಪ್ರೆಸ್ ಮತ್ತು ಶಾಲಿಮಾರ್-ಚೆನೈ ಕೋರಮಂಡಲ್ ಎಕ್ಸ್ ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾ ಬಾಲಸೋರ್ ನಲ್ಲಿ ನಡೆದ ರೈಲು ಪಘಾತ ದೇಶವನ್ನೇ ಬೆಚ್ಚಿ ಬೀಳಿಸಿದೆ.
ಈ ಘಟನೆಗೆ ಸಂಬಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಒಡಿಶಾ ಬಾಲ್ ಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆ ಘಟನಾ ಸ್ಥಳದಿಂದ ಕನ್ನಡಿಗರನ್ನು ಸುರಕ್ಷಿತವಾ ಕರೆತರುವಂತೆ ಎಲ್ಲ ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಘಟನಾ ಸ್ಥಳಕ್ಕೆ ಹೋಗಿ ಅಗತ್ಯ ನೆರವು ನೀಡುವಂತೆ ಸಂತೋಷ ಲಾಡ್ ಅವರಿಗೆ ಸಿದ್ದು ಸೂಚಿಸಿದ್ದಾರೆ.
“ಪ್ರತಿಯೊಬ್ಬ ಕನ್ನಡಿಗರು ಸುರಕ್ಷಿತವಾಗಿ ಕರೆ ತರುತ್ತೇವೆ” ಎಂದು ಸಿದ್ದು ಟ್ವಿಟ್ ಮಾಡಿದ್ದಾರೆ.