ಶುಕ್ರವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರದ 9ನೇ ವರ್ಷಾಚರಣೆ ರದ್ದಾಗಿದೆ. ಈ ಕಾರ್ಯಕ್ರಮ ರದ್ದಾಗಲು ಕಾರಣ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ ನಡ್ದಾ ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಒಡಿಶಾದ ಬಾಲ್ ಸೋರ್ ನಲ್ಲಿ ನಡೆದ ರೈಲು ದುರಂತದ ಬಳಿಕ ಪ್ರತಿಕ್ರಿಯಿಸಿರುವ ವಿಪಕ್ಷಗಳು ಈ ಘಟನೆಯ ಕುರಿತಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ದುರ್ಘಟನೆಯ ಹೊಣೆ ಹೊತ್ತು ರೈಲ್ವೈ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.