Kornersite

Just In Karnataka Maharashtra National Politics State Uttar Pradesh

Amit Shah: ಮತ್ತೆ ಎನ್ ಡಿಎ ತೆಕ್ಕೆಗೆ ಟಿಡಿಪಿ!?

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಸುಮಾರು 40 ನಿಮಿಷಕ್ಕೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಬಹುದು ಎಂದು ಮೂಲಗಳಿಂದು ತಿಳಿದು ಬಂದಿದೆ. ಟಿಡಿಪಿ 2014 ರಲ್ಲಿ ಕೂಡ ಎನ್‌ ಡಿಎ ಭಾಗವಾಗಿತ್ತು. ಆದರೆ 2019 ರ ಚುನಾವಣೆಯ ಮೊದಲು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ 2018 ರಲ್ಲಿ ಆಡಳಿತ ಮೈತ್ರಿಕೂಟವನ್ನು ತ್ಯಜಿಸಿತು.
2019 ರ ಚುನಾವಣೆಯ ನಂತರ ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಚಂದ್ರಬಾಬು ನಾಯ್ಡು ಒಮ್ಮೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಸದ್ಯ ಮತ್ತೆ ಎರಡೂ ಪಕ್ಷಗಳ ಮಧ್ಯೆ ಮಾತುಕತೆ ನಡೆಯುತ್ತಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು