Kornersite

Crime Just In Karnataka National State

Crime News: ಭಯಾನಕ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು!

ಚಿತ್ತೂರು : ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಶನಿವಾರ ಈ ಘಟನೆ ನಡೆದಿದೆ. ನಂದ್ಯಾಲ ಜಿಲ್ಲೆಯ ನಿವಾಸಿಗಳು ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ.

ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಮೃತರ ಮತ್ತು ಗಾಯಗೊಂಡವರ ಗುರುತು ಇನ್ನು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ