ನವದೆಹಲಿ : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಚಾಕು ಇರಿದು, ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ನಡೆದಿದೆ.
ಅಲ್ಲಿಯ ಅಮಿತ್ ಎಂಬ ವ್ಯಕ್ತಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಪ್ರೀತಿಸುತ್ತಿದ್ದ ಯುವತಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈತ ಯುವತಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಯುವತಿ ಒಪ್ಪಿಕೊಳ್ಳದ ಕಾರಣ ಆಕೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ.
ನಿನ್ನೆ ಮಧ್ಯಾಹ್ನ ಕಚೇರಿಗೆ ಬಂದ ಅಮಿತ್ ಯುವತಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆತನನ್ನು ಸಿಬ್ಬಂದಿ ತಡೆದಿದ್ದಾರೆ. ಚೂರಿ ಇರಿತದಿಂದ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂತರ ಕಚೇರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.