Kornersite

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ.

ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ರಾತ್ರಿ ಬಾಲಸೋರ್ ನಲ್ಲಿ ಮೂರು ರೈಲುಗಳು ಕೋಲ್ಕತ್ತಾ (Kolkata)-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು (Bengaluru)-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ