Kornersite

Bengaluru Entertainment Just In Karnataka Sandalwood State

Abhishek Ambarish: ಇಂದು ದಾಂಪತ್ಯ ಜೀನವಕ್ಕೆ ಕಾಲಿಡುತ್ತಿರುವ ಯುವ ರೆಬೆಲ್ ಸ್ಟಾರ್- ಅವಿವಾ!

ಚಂದನವನದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಮಾಡೆಲಿಂಗ್ ಕ್ಷೇತ್ರದ ಅವಿವಾ ಬಿಡಪ್ಪ (Aviva Bidappa) ಇಂದು ಬೆಳಗ್ಗೆ 9.30 ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ (Marriage) ಬಂಧನಕ್ಕೆ ಒಳಗಾಗಲಿದೆ. ಈಗಾಗಲೇ ಅಭಿಷೇಕ್ ಮತ್ತು ಅವಿವಾ ಮದುವೆ ನಡೆಯುವ ಬೆಂಗಳೂರಿನ ಅರಮನೆ ಮೈದಾನದತ್ತ ಹೆಜ್ಜೆ ಹಾಕಿದ್ದಾರೆ. ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಹಾಗೂ ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿಡಪ ಅವರ ಪುತ್ರಿ ಅವಿವ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆನಂತರ ಎರಡು ಕುಟುಂಬಸ್ಥರು ಒಪ್ಪಿ ಮದುವೆ ನಿಶ್ಚಿತಾರ್ಥ ನೆರವೇರಿಸಿದ್ದಾರೆ.

ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳು ಅಂಬಿ ಮನೆಯಲ್ಲ ಮುಗಿದಿವೆ.

ಇಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು 1 ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,