Kornersite

Just In National

ಹುಷಾರ್..! ಮಹಿಳೆಯರಿಗೆ ಒಳ್ಳೆ ಫಿಗರ್ ಅಂದ್ರೆ ಜೈಲು ಗ್ಯಾರಂಟಿ!

ಮಹಿಳಾ ಉದ್ಯೋಗಿಗಳಿಗೆ, ಸ್ನೇಹಿತೆಯರಿಗೆ, ಮಹಿಳೆಯರಿಗೆ ‘ನೀನು ಒಳ್ಳೆಯ ಫಿಗರ್‌ ಇದ್ದೀಯಾ, ಉತ್ತಮವಾಗಿ ಫಿಗರ್‌ ಮೇಂಟೇನ್‌ ಮಾಡಿದ್ದೀಯಾ, ನಮ್ಮೊಂದಿಗೆ ಆಚೆ ಬರುತ್ತೀಯಾ?’ ಎಂದು ಮಾತನಾಡುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಸೆಷನ್ಸ್‌ ಕೋರ್ಟ್ ಹೇಳಿದೆ.

ರಿಯಲ್‌ ಎಸ್ಟೇಟ್‌ ಸಂಸ್ಥೆಯೊಂದರ ಕಚೇರಿಯಲ್ಲಿ ಅಸಿಸ್ಟಂಟ್‌ ಮ್ಯಾನೇಜರ್‌ ಆಗಿದ್ದ 42 ವರ್ಷದ ಪುರುಷನೊಬ್ಬ ಈ ರೀತಿಯ ಪದಗಳನ್ನು ಮಹಿಳೆಗೆ ಬಳಸಿದ್ದ. ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆತನಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಕೋರ್ಟ್, ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಹೀಗಾಗಿ ಆರೋಪಿಯನ್ನು ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಇದು ಸೂಕ್ತ ಪ್ರಕರಣವಲ್ಲ. ಇದು ಗಂಭೀರ ಪ್ರಕರಣವಾಗಿದ್ದು ಆರೋಪಿಯ ವಿಚಾರಣೆ ಅಗತ್ಯವಿದೆ ಎಂದು ಕೋರ್ಟ್ ಹೇಳಿದೆ. ವ್ಯಕ್ತಿಯ ವಿರುದ್ಧ ಮ್ಯಾನೇಜರ್‌ ವಿರುದ್ಧ ಮಹಿಳಾ ಉದ್ಯೋಗಿ ದೂರು ದಾಖಲಿಸಿದ್ದರು. ಮಾ.1 ರಿಂದ ಏ.14ರ ವರೆಗೆ ಆರೋಪಿಯು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಸಾಕ್ಷಿಗಳು ಹಾಗೂ ದಾಖಲೆಗಳನ್ನು ಸಲ್ಲಿಸಲಾಗಿದೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ