ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವು ಭರವಸೆಯೊಂದಿಗೆ ಭರ್ಜರಿ ಗೆಲುವು ಸಾಧಿಸಿ, ಈಗ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಮೊದಲ ಬಾರಿಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದೆ.
ಇಂದು ಹಾಗೂ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯುತ್ ನ ಕನಿಷ್ಠ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯು ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರದ ಜನ ವಿರೋಧಿ ನಿರ್ಧಾರಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಇಂದು ಹಾಗೂ ನಾಳೆ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಹೇಳಿದ್ದಾರೆ.
ಬಿಜೆಪಿ ಸರ್ಕಾರವು ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಗೆ 5 ರೂ. ನೀಡುತ್ತಿತ್ತು. ಈ ಪೈಕಿ ಕಾಂಗ್ರೆಸ್ ಸರ್ಕಾರವು 1.5 ರೂ. ಕಡಿಮೆ ಮಾಡಿದೆ. ಇದರಿಂದಾಗಿ ರೈತರಿಗೆ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿಯೇ ಬಿಜೆಪಿ ಪಕ್ಷವು ಕಾಂಗ್ರೆಸ್ ವಿರುದ್ಧ ರಸ್ತೆಗೆ ಇಳಿಯುತ್ತಿದೆ.