ಧಾರವಾಡ: ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.
ಕಲಘಟಗಿ ಪಟ್ಟಣದ ಬೆಂಡಿಗೇರಿ ಓಣಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸಹೋದರಿಯರು (Sisters) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.