Kornersite

Bengaluru Just In Karnataka Politics State

Free Bus Travel: ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ; ಮಾರ್ಗಸೂಚಿ ಏನು?

ಬೆಂಗಳೂರು : ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel)ಕ್ಕೆ ಈಗಾಗಲೇ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಸದ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಉಚಿತ ಪ್ರಯಾಣವು ರಾಜ್ಯದೊಳಗೆ ಮಾತ್ರ ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದಾಗಿದೆ. ಆದರೆ, ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ (Luxury) ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು. ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುತ್ತದೆ.
ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು