ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೂ ಮೊದಲೇ ಆಸೀಸ್ ತಂಡಕ್ಕೆ ಆಘಾತ ಎದುರಾಗಿದೆ.
ಆಸ್ಟ್ರೇಲಿಯಾ ತಂಡದ ಸ್ಟಾರ್ ಬೌಲರ್ ಜೋಶ್ ಹೇಜಲ್ವುಡ್ ಗಾಯದ ಸಮಸ್ಯೆಯಿದಿಂದಾಗಿ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡು ತಂಡಗಳ ನಡುವಿನ ಫೈನಲ್ ಪಂದ್ಯ ಜೂ. 7ರಂದು ಇಂಗ್ಲೆಂಡ್ ನ ಓವಲ್ ನಲ್ಲಿ ನಡೆಯಲಿದ್ದು, ಇದಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ ನಿಂತಿವೆ.
ಈ ನಡುವೆ ಆಸೀಸ್ ತಂಡದ ಪ್ರಮುಖ ಬೌಲರ್ ಆಗಿರುವ ಹೇಜಲ್ವುಡ್ ಗಾಯದ ಸಮಸ್ಯೆಯ ಕಾರಣದಿಂದಾಗಿ ಫೈನಲ್ ಪಂದ್ಯದಿಂದ ಔಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯ, ತಡವಾಗಿ 15 ಆಟಗಾರರ ತಂಡವನ್ನ ಪ್ರಕಟಿಸಿದೆ. ಇತ್ತೀಚೆಗೆ ನಡೆದ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದಿದ್ದ 32 ವರ್ಷದ ಜೋಶ್ ಹೇಜಲ್ವುಡ್, ಫೈನಲ್ ಪಂದ್ಯಕ್ಕಾಗಿ ಆಸೀಸ್ ತಂಡವನ್ನ ಸೇರ್ಪಡೆಗೊಂಡು ತಯಾರಿ ಸಹ ಆರಂಭಿಸಿದ್ದರು. ಆದರೆ ಗಾಯದ ಸಮಸ್ಯೆ ಕಾರಣದಿಂದಾಗಿ ಇದೀಗ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೇಜಲ್ವುಡ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಮೈಕಲ್ ನೇಸರ್ ಅವರನ್ನ ಆಸ್ಟ್ರೇಲಿಯಾ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆದರೆ ಆಸೀಸ್ ತಂಡದ ಸ್ಟಾರ್ ಬೌಲರ್ ಆಗಿರುವ ಜೋಶ್ ಹೇಜಲ್ವುಡ್, ಜೂ.16ರಿಂದ ಬರ್ಮಿಂಗ್ಹ್ಯಾಮ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಆಶಸ್ ಟೆಸ್ಟ್ ಸರಣಿ ವೇಳೆಗೆ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆ ಹೊಂದಲಾಗಿದೆ.
ಆಸ್ಟ್ರೇಲಿಯಾ ತಂಡ(ಅಪ್ಡೇಟೆಡ್):
ಪ್ಯಾಟ್ ಕಮಿನ್ಸ್(ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ, ಕೆಮರೂನ್ ಗ್ರೀನ್, ಮ್ಯಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜ, ಮಾರ್ನಸ್ ಲಬುಶೇನ್, ನೇಥನ್ ಲಯಾನ್, ಟಾಡ್ ಮರ್ಫಿ, ಮೈಕಲ್ ನೇಸರ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.