Kornersite

Crime National

Accident: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು!

ಸೈಕಲ್ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ವೇಗವಾಗಿ ಬಂದ ಬೊಲೆರೋ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಘಟನೆಯಲ್ಲಿ 7 ಜನ ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್ ಕ್ಲಾಸ್ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ. ಆಗ ಹಿಂದಿನಿಂದ ಬಂದ ಬೊಲೆರೋ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.

ಆಗ ಓರ್ವ ವಿದ್ಯಾರ್ಥಿನಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದನ್ನು ನೋಡಿದ ಡ್ರೈವರ್, ಅಪಘಾತ ಸ್ಥಳದಿಂದ ಸುಮಾರು 20 ಅಡಿಗಳಷ್ಟು ಆಕೆಯನ್ನು ಎಳೆದೊಯ್ದಿದ್ದಾನೆ. ನಂತರ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ