Kornersite

Crime Just In National

ಸಾವಿರಾರು ಜನರ ಹೃದಯದ ನೋವು ಗುಣಪಡಿಸಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ!

ಸಾವು ಯಾರಿಗೆ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಸದ್ಯ ಹೃದಯಕ್ಕೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಗುಜರಾತ್‌ ನ ಪ್ರಮುಖ ಹೃದ್ರೋಗ ತಜ್ಞರಾಗಿ ಗುರುತಿಸಿಕೊಂಡಿದ್ದ ಗೌರವ್ ಗಾಂಧಿ (41) ಮಂಗಳವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.ಪ್ರ ತಿ ದಿನದಂತೆ ಆಸ್ಪತ್ರೆಗೆ ತೆರಳಿ, ರೋಗಿಗಳನ್ನು ಪರೀಕ್ಷೆ ಮಾಡಿದ್ದಾರೆ. ನಂತರ ಮನೆಗೆ ಬಂದು ಊಟ ಮಾಡಿ ಮಲಗಿದ್ದಾರೆ. ಆದರೆ, ಬೆಳಿಗ್ಗೆ ಮನೆಯವರು ಎಬ್ಬಿಸಿದಾಗ ಪ್ರಜ್ಞೆ ತಪ್ಪಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ವೈದ್ಯರು ಸಾವನ್ನಪ್ಪಿದ್ದಾರೆಂದು ಘೋಷಿಸಿದ್ದಾರೆ.

ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಡಾ. ಗಾಂಧಿ ಅಹಮದಾಬಾದ್‌ನಲ್ಲಿ ಹೃದ್ರೋಗ ಶಾಸ್ತ್ರಕ್ಕೆ ಸಂಬಂಧಿಸಿದ ಅಧ್ಯಯನ ಮಾಡಿದ್ದರು . ಅವರು ಫೇಸ್‌ಬುಕ್‌ನಲ್ಲಿ ‘ಹಾಲ್ಟ್ ಹಾರ್ಟ್ ಅಟ್ಯಾಕ್’ ಅಭಿಯಾನದಲ್ಲಿ ಗುರುತಿಸಿಕೊಂಡಿದ್ದರು ಎಂದು ವರದಿ ತಿಳಿಸಿದೆ. ಅವರು ತಮ್ಮ ವೈದ್ಯಕೀಯ ವೃತ್ತಿಯಲ್ಲಿ 16 ಸಾವಿರಕ್ಕೂ ಅಧಿಕ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ವರದಿಯಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ