Kornersite

Crime Just In Maharashtra National

Crime News: ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆಯ ಬರ್ಬರ ಕೊಲೆ; ನಂತರ ದೇಹ ಪೀಸ್ ಪೀಸ್ ಮಾಡಿದ ಪಾಪಿ!

ಮುಂಬಯಿ : ವ್ಯಕ್ತಿಯೊಬ್ಬ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ನಂತರ ದೇಹವನ್ನು ಪೀಸ್ ಪೀಸ್ ಮಾಡಿರುವ ಘಟನೆಯೊಂದು ಮುಂಬಯಿನಲ್ಲಿ ಬೆಳಕಿಗೆ ಬಂದಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Mumbai Police) ಮನೋಜ್ ಸಹಾನಿ (56) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‍ನಲ್ಲಿ ಸರಸ್ವತಿ ವೈದ್ಯ ಎಂಬಾಕೆಯೊಂದಿಗೆ ಈತ ವಾಸಿಸುತ್ತಿದ್ದ ಎನ್ನಲಾಗಿದೆ.

ಇಬ್ಬರು ಇದ್ದ ಫ್ಲಾಟ್ ನಿಂದ ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ನಯಾನಗರ ಪೊಲೀಸ್ ಠಾಣೆ (Nayanagar Police Station) ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದ್ದಾರೆ. ಆಗ ಈ ಕೊಲೆ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿಯಂತೆ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಂಪತಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ